ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ ವಿಡಿಯೋ ವೈರಲ್ ಮಾಡಿದ ಯುವಕರ ತಂಡ

ಸುಳ್ಯ ಡಿಸೆಂಬರ್ 28:ಯುವಕರ ತಂಡವೊಂದು ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ್ದಲ್ಲದೇ ಹಲ್ಲೆಯ ವಿಡಿಯೋ ನಡೆಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ.

ನಗರದ ಕುಕ್ಕಾಜೆ ಕಾನದ ಆಟೋ ಚಾಲಕ ಪುರುಷೋತ್ತಮ ಎಂಬವರಿಗೆ ಯುವಕರು ಹಲ್ಲೆ ನಡೆಸಿದ್ದಾರೆ. ಈಗ ಹಲ್ಲೆ ನಡೆಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಣಕಾಸಿನ ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಸಂಶಯಿಸಲಾಗಿದೆ. ಸದ್ಯ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.