Connect with us

    KARNATAKA

    ಪ್ರಚೋದನಕಾರಿ ಹೇಳಿಕೆ – ಅರುಣ್ ಕುಮಾರ್ ಪುತ್ತಿಲ್ ವಿರುದ್ದ ಶಿವಮೊಗ್ಗದಲ್ಲಿ ಪ್ರಕರಣ ದಾಖಲು

    ಶಿವಮೊಗ್ಗ ಅಕ್ಟೋಬರ್ 07: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಚೋಧನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.


    ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ್ದ ಪುತ್ತಿಲ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,ʼʼರಾಗಿಗುಡ್ಡದಲ್ಲಿ ಮುಸ್ಲಿಂ ಸಮುದಾಯದಿಂದ ಘಟನೆ ನಡೆದಿದೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂಡ್ರೈವರ್, ಸ್ಪಾನರ್ ಕೈ ಬಿಡಿ ತಲ್ವಾರ್ ಗಳಿಗೆ ಪೂಜೆ ಮಾಡಿʼʼ ಎಂದು ಪ್ರಚೋದನಕಾರಿ‌ ಹೇಳಿಕೆ ನೀಡಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *