ದೈವದ ಪಾತ್ರಿಗೆ ತಲೆ ಬೊಳಿಸಿ ಹಲ್ಲೆ ನಡೆಸಿದ ಪ್ರಕರಣ ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ಮಂಗಳೂರು ಮೇ 14: ಸಲಿಂಗ ಕಾಮ ಆರೋಪದ ಹಿನ್ನಲೆಯಲ್ಲಿ ದೈವದ ಪಾತ್ರಿಯೊಬ್ಬರ ತಲೆ ಬೋಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ಸೂಚನೆಯಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಲಿಂಗ ಕಾಮದ ಆರೋಪದಡಿ ಬಿಕರ್ನಕಟ್ಟೆ ಬಳಿ ದೈವಪಾತ್ರಿಯೊಬ್ಬರಿಗೆ ಮಹಿಳೆಯರ ಸಹಿತ ನಾಗರಿಕರು ಸೇರಿ ತಲೆ ಕೂದಲನ್ನು ಬಲವಂತವಾಗಿ ಕತ್ತರಿಸಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೀರಿತ ದೂರು ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲಿಸ್ ಆಯುಕ್ತರಾದ ಸಂದೀಪ್ ಪಾಟೀಲ್ ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ.

ಈ ಹಿನ್ನೆಲೆಯಲ್ಲಿ ಪೊಲೀಸರೇ ಸ್ವಂ ಪ್ರೇರಿತ ದೂರು ದಾಖಲು ಮಾಡಿದ್ದು ಅರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಈ ನಡುವೆ ಲೋಕೇಶ್ ಪೂಜಾರಿ ವೃತ್ತಿಯಲ್ಲಿ ದೈವದ ಪಾತ್ರಿಯಾಗಿದ್ದರೂ,

ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.

 

 

VIDEO