LATEST NEWS
ಕಾಂಗ್ರೇಸ್ ಭಾರತ್ ಜೋಡೋ ಉತ್ತರಕ್ಕೆ ತಲುಪುವಾಗ ಅಲ್ಲಿ ಕಾಂಗ್ರೇಸ್ ಇರಲ್ಲ – ಸುನೀಲ್ ಕುಮಾರ್

ಉಡುಪಿ ಸೆಪ್ಟೆಂಬರ್ 10:ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ. ಮೊದಲು ಕಾಂಗ್ರೆಸ್ ಜೋಡೋ ಮಾಡಬೇಕು. ದಕ್ಷಿಣದಲ್ಲಿ ಕಾಂಗ್ರೆಸ್ ಜೋಡೋ ನಡೆಯುತ್ತಿದ್ದರೆ, ಉತ್ತರದಲ್ಲಿ ಹಿರಿಯ ನಾಯಕರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ದಕ್ಷಿಣದವರು ಯಾತ್ರೆ ಮುಗಿಸಿ ಉತ್ತರ ತಲುಪುವಾಗ ಅಲ್ಲಿ ಕಾಂಗ್ರೆಸ್ ಇರಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಇಂಧನ ಇಲಾಖೆ ಮಾಜಿ ಸಚಿವ ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಅವರೇ ಸವಾಲು ಹಾಕಿದ್ದಾರೆಯೇ ಹೊರತು ನಾನು ಹಾಕಿಲ್ಲ. ಅವರು ಹಾಕಿರುವ ಸವಾಲು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದ್ದೇನೆ. ಈ ಬಗ್ಗೆ ಯಾವ ರೀತಿ ತನಿಖೆ ನಡೆಸುವುದು ಎಂಬುದನ್ನು ಮುಂದಿನ ದಿನಗಳಲ್ಲಿ ಸ್ಪಷ್ಟಪಡಿಸುತ್ತೇನೆ ಎಂದರು.

ದಕ್ಷಿಣದಲ್ಲಿ ಕಾಂಗ್ರೆಸ್ ಜೋಡೋ ನಡೆಯುತ್ತಿದ್ದರೆ, ಉತ್ತರದಲ್ಲಿ ಹಿರಿಯ ನಾಯಕರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ದಕ್ಷಿಣದವರು ಯಾತ್ರೆ ಮುಗಿಸಿ ಉತ್ತರ ತಲುಪುವಾಗ ಅಲ್ಲಿ ಕಾಂಗ್ರೆಸ್ ಇರಲ್ಲ. ಒಬ್ಬರೇ ಏಕಾಂಗಿಯಾಗಿ ಪಾದಯಾತ್ರೆ ಮಾಡುವ ಪರಿಸ್ಥಿತಿ ಬರಬಹುದು. ಆದುದರಿಂದ ಪಾದಯಾತ್ರೆ ಮೊಟಕುಗೊಳಿಸಿ ಕಾಂಗ್ರೆಸ್ ಉಳಿಸಿಕೊಳ್ಳುವುದು ಮಾಡಲಿ ಎಂದು ಟೀಕಿಸಿದರು.