Connect with us

LATEST NEWS

ಆರು ಮಂದಿ ನಕ್ಸಲರನ್ನು ಸ್ವಾಗತಿಸಲು ನಡು ಬಗ್ಗಿಸಿ ನಿಂತಿದ್ದಾರೆ- ಕಾರ್ಕಳ ಶಾಸಕ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ ಜನವರಿ 08: ರಾಜ್ಯದ ನಕ್ಸಲ್ ರಿಗೆ ಶರಣಾಗತಿ ಪ್ಯಾಕೆಜ್ ಘೋಷಿಸಿರುವುದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಾಮಾಜಿಕ ಜಾಲತಾಣ ʼಎಕ್ಸ್‌ʼ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ʼಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! ʼ ಎಂದು ಟೀಕಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ @siddaramaiah ನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ . ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ? ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕ್ಸಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್‌ಪೆಕ್ಟರ್ ಎದುರು. ಆದರೆ ಇಲ್ಲೇನಾಗುತ್ತಿದೆ ?

ಆರು ಕೋಟಿ ಕನ್ನಡಿಗರ ಮುಖ್ಯಮಂತ್ರಿ ತಮ್ಮ ಅಧಿಕೃತ ಕಚೇರಿಯಲ್ಲಿ ಆರು ಮಂದಿ ನಕ್ಸಲರನ್ನು ಸ್ವಾಗತಿಸಲು ನಡು ಬಗ್ಗಿಸಿ ನಿಂತಿದ್ದಾರೆ. ಕರ್ನಾಟಕದಲ್ಲಿ ಕಾನೂನಿನ ಕೊಲೆಯಾಗಿದೆ. ಸರ್ಕಾರವೇ ಪ್ರಾಯೋಜಿಸಿದೆ ಎಂದು ಟೀಕಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *