DAKSHINA KANNADA
ಸುನೀಲ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ
ಸುಬ್ರಹ್ಮಣ್ಯ ಸೆಪ್ಟೆಂಬರ್ 16:ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು. ಮೂಲತ ತುಳುನಾಡಿನವರಾದ ಸುನಿಲ್ ಶೆಟ್ಟಿ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡುವ ಸಂದರ್ಭ ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೂ ಭೇಟಿ ನೀಡುವುದು ಸಾಮಾನ್ಯವಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿದ ಸುನಿಲ್ ಶೆಟ್ಟಿಯವರನ್ನು ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸುನಿಲ್ ಶೆಟ್ಟಿ ಜೊತೆ ಅವರ ಕುಟುಂಬ ವರ್ಗ ಹಾಗೂ ಸ್ನೇಹಿತ ಬಳಕವೂ ಉಪಸ್ಥಿತರಿದ್ದರು.
You must be logged in to post a comment Login