Connect with us

    LATEST NEWS

    ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ – ಸಚಿವ ಸುನಿಲ್ ಕುಮಾರ್

    ಉಡುಪಿ ನವೆಂಬರ್ 1: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂಬ ಮಾತು ಎಲ್ಲಾ ಕಡೆ ಕೇಳಿ ಬಂದಿದೆ. ಆದರೆ ನಿಯಮಾವಳಿ ಹಾಗೂ ಕೋರ್ಟ್ ಆದೇಶದ ಪ್ರಕರಾ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಅವಕಾಶ ಇಲ್ಲ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.


    ಉಡುಪಿಯಲ್ಲಿ ಮಾತನಾಡಿದ ಅವರು ಪುನೀತ್ ರಾಜಕುಮಾರ್ ನಿಧಾನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು. ಸರಕಾರ ಎಲ್ಲಾ ಎಚ್ಚರಿಕೆಗಳ ತೆಗೆದುಕೊಂಡು ಶ್ರದ್ಧಾಂಜಲಿ ಅರ್ಪಿಸಿದೆ. ಪುನೀತ್ ರಾಜಕುಮಾರ್ ಗೆ ರಾಜ್ಯೋತ್ಸವ ಕೊಡಬೇಕು ಎಂಬ ಮಾತು ಎಲ್ಲಾ ಕಡೆಗಳಿಂದ ಕೇಳಿಬಂದಿದ್ದು, ನಿಯಮಾವಳಿ ಮತ್ತು ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ, ಅವಕಾಶ ಇಲ್ಲದ ಕಾರಣ ಈ ಬೇಡಿಕೆ ಪರಿಗಣಿಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಪುನೀತ್ ರಾಜಕುಮಾರ್ ಸೇವೆಯನ್ನ ಪರಿಗಣಿಸುತ್ತೇವೆ. ಯಾವ ರೀತಿಯ ಗೌರವ ಕೊಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ. ಈಗಲೇ ಯಾವುದೇ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ದೀಪಾವಳಿ ನಂತರ ಸಭೆ ನಡೆಸಿ ಗೌರವ ಸಲ್ಲಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply