Connect with us

LATEST NEWS

ಬೆಂಗಳೂರಿನಲ್ಲಿ ಅಣ್ಣನ ಆಶೀರ್ವಾದ ಪಡೆದ ಸೂಪರ್ ಸ್ಟಾರ್ ರಜನಿಕಾಂತ್

ಬೆಂಗಳೂರು : 2021ಕ್ಕೆ ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ದತೆ ನಡೆಸುತ್ತಿರುವ ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ನಿನ್ನೆ ಬೆಂಗಳೂರಿಗೆ ಆಗಮಿಸಿ ತಮ್ಮ ಹಿರಿಯ ಸಹೋದರ ಸತ್ಯನಾರಾಯಣ ಅವರ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು.


ಈ ವೇಳೆ ಸಾಕಷ್ಟು ಹೊತ್ತು ಕುಳಿತು ರಜನಿಕಾಂತ್ ಮತ್ತು ಸತ್ಯನಾರಾಯಣ ಅವರು ಉಭಯ ಕುಶಲೋಪರಿ ವಿಚಾರಿಸಿದರು. ಇದೇ ಡಿಸೆಂಬರ್ 3ರಂದು ನಟ ರಜನಿಕಾಂತ್ ಜನವರಿಯಲ್ಲಿ ಹೊಸ ಪಕ್ಷ ಘೋಷಣೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ ಡಿಸೆಂಬರ್ 31ರಂದು ಹೊಸ ಪಕ್ಷ ಕಟ್ಟುವ ಕುರಿತ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿದ್ದ ರಜನಿಕಾಂತ್, ‘ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವಾಗಲೂ ಸಾಧ್ಯವಿಲ್ಲ ಎಂದಿದ್ದಾರೆ. ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಈ ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡಲಾಗುವುದು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಜನರ ಬೆಂಬಲದೊಂದಿಗೆ ಧಾರ್ಮಿಕ ರಾಜಕೀಯ ತಮಿಳು ನಾಡಿನಲ್ಲಿ ಆರಂಭವಾಗಲಿದೆ ಎಂದು ತಿಳಿಸಿದ್ದರು.

Facebook Comments

comments