Connect with us

    LATEST NEWS

    ಜಿಲ್ಲಾಡಳಿತದ ಕಠಿಣ ನಿರ್ಧಾರಗಳಿಗೆ ಸಹಕರಿಸಿ – ಕೋಟ ಶ್ರೀನಿವಾಸ ಪೂಜಾರಿ ಮನವಿ

    ಜಿಲ್ಲಾಡಳಿತದ ಕಠಿಣ ನಿರ್ಧಾರಗಳಿಗೆ ಸಹಕರಿಸಿ – ಕೋಟ ಶ್ರೀನಿವಾಸ ಪೂಜಾರಿ ಮನವಿ

    ಮಂಗಳೂರು ಮಾ.21:ದ.ಕ ಜಿಲ್ಲೆಯಿಂದ ಈವರೆಗೆ ಕರೋನಾ ಶಂಕಿತ 89 ಜನರ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅಷ್ಟು ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಭೆಯ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು ಕರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೆಲವೊಂದು ಕಟು ನಿರ್ಧಾರಗಳನ್ನು ದ.ಕ. ಜಿಲ್ಲಾಡಳಿತ ಕೈಗೊಳ್ಳುವ ಪರಿಸ್ಥಿತಿ ಬರಬಹುದು ಅಂತಹ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು ಮನವಿ ಮಾಡಿದರು.
    ಅಧಿಕೃತವಾಗಿ ಜಿಲ್ಲೆಯ ಸೋಂಕಿತರು ಇಲ್ಲ. ಆದರೂ ಮುಂದಿನ ದಿನಗಳಲ್ಲಿ ಸೋಂಕಿತರು ಕಂಡುಬಂದರೆ ಜಿಲ್ಲೆಯಲ್ಲಿ ಇದರ ನಿಯಂತ್ರಣಕ್ಕೆ ಅತ್ಯಂತ ಕಠಿಣ ನಿರ್ಧಾರಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕಾಗುತ್ತದೆ. ಜನರು ಇಂತಹ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಒತ್ತಡ ಹೇರದೆ ಜಿಲ್ಲಾಡಳಿತದ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ ಎಂದು ಹೇಳಿದರು.

    ಕೇರಳ ಮತ್ತು ದಕ್ಷಿಣ ಕನ್ನಡಕ್ಕೆ ಒಟ್ಟು 17 ದಾರಿಗಳಿದ್ದು ಇವುಗಳಲ್ಲಿ 16 ದಾರಿಗಳನ್ನು ಶನಿವಾರದಿಂದಲೇ ಅನ್ವಯವಾಗುವಂತೆ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಅನಿವಾರ್ಯವಾಗಿ ತುರ್ತು ಪ್ರಕರಣಗಳಲ್ಲಿ ಸಂಪೂರ್ಣವಾಗಿ ತಪಾಸಣೆಗೊಳಪಡಿಸಿದ ಬಳಿಕವೇ ಜನರನ್ನು ಬಿಡಲಾಗುವುದು ಅಲ್ಲದೆ ತುರ್ತು ಅವಶ್ಯಕ ಸಾಮಗ್ರಿಗಳ ವಾಹನಗಳಿಗೆ ತಲಪಾಡಿ ರಸ್ತೆಯಿಂದ ಸಂಚರಿಸಲು ಅವಕಾಶ ನೀಡುವಂತ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply