LATEST NEWS
ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿಗಾಗಿ ಮುಗಿಬಿದ್ದ ಜನ

ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿಗಾಗಿ ಮುಗಿಬಿದ್ದ ಜನ
ಮಂಗಳೂರು ಜೂನ್ 25: ಧರ್ಮಸ್ಥಳದ ಶಾಂತಿವನ ಪೃಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗಾಗಿ ರಾಜಕೀಯ ಮುಖಂಡರ ದಂಡೆ ಧರ್ಮಸ್ಥಳದಲ್ಲಿ ಬರುತ್ತಿದೆ. ಈ ನಡುವೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಕೂಡ ಧರ್ಮಸ್ಥಳದ ಶಾಂತಿವನಕ್ಕೆ ಬರುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಶಾಂತಿವನದಿಂದ ಹೊರಗೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಜೊತೆ ಮಾತುಕತೆ ನಡೆಸಿದರು. ನಂತರ ಅಭಿಮಾನಿಗಳ ಜೊತೆ ಸೆಲ್ಪಿಗೆ ಪೋಸ್ ಕೊಟ್ಟರು. ಸಿದ್ದರಾಮಯ್ಯ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿ ಅಭಿಮಾನಿಗಳು ಸಂತೋಷ ಪಟ್ಟರು.

ನಂತರ ಅಭಿಮಾನಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಒಳಗೆ ಬರಬೇಡಿ ಸಮಸ್ಯೆ ಆಗುತ್ತೆ ಎಂದರು.