LATEST NEWS
ಹಿಜಬ್ ವಿವಾದ – ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ
ಉಡುಪಿ ಅಗಸ್ಟ್ 28: ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಬ್ ನಿರ್ಬಂಧ ಕುರಿತಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು, ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಅವರ ಮೊದಲ ಕೆಲಸದ ದಿನವಾದ ನಾಳೆ ಅರ್ಜಿಗಳನ್ನು ಆಲಿಸಲಿದೆ.
ಶಾಲಾ-ಕಾಲೇಜುಗಳ ಏಕರೂಪ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹಿಜಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿತ್ತು. ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.