LATEST NEWS
ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ – ಸುಪ್ರೀಂಕೋರ್ಟ್ ಗರಂ
ದೆಹಲಿ ಜುಲೈ 01: ತಮ್ಮ ಹೇಳಿಕೆ ವಿರುದ್ದ ದೇಶದಾದ್ಯಂತ ಸಲ್ಲಿಕೆಯಾಗಿರುವ ಎಫ್ಐಆರ್ ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ದ ಇಂದು ಸುಪ್ರೀಂ ಕೋರ್ಟ್ ಗರಂ ಆಗಿದ್ದು, ದೇಶದಲ್ಲಿ ಗಲಾಟೆಗಳಿಗೆ ನೂಪುರ್ ಶರ್ಮಾ ಕಾರಣವಾಗಿದ್ದು, ಆಕೆ ದೇಶದ ಜನರ ಕ್ಷಮೆಯಾಚಿಸಬೇಕೆಂದು ಹೇಳಿದೆ.
ದೇಶದಲ್ಲಿ ಇಷ್ಟೆಲ್ಲಾ ನಡೆಯಲು ಅವರು ಒಬ್ಬರೇ ಕಾರಣ ಎಂದು ಕೋರ್ಟ್ ಹೇಳಿದೆ. ಅವರ ಹೇಳಿಕೆ ಹೇಗೆ ಪ್ರಚೋದಿಸಲಾಗಿದೆ ಎಂಬ ಚರ್ಚೆಯನ್ನು ನಾವು ನೋಡಿದ್ದೇವೆ. ಆದರೆ ಅವರು ಇದನ್ನೆಲ್ಲ ಹೇಳಿದ ರೀತಿ ಮತ್ತು ನಂತರ ತಾನು ವಕೀಲೆ ಎಂದು ಹೇಳುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.
ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದಯ್‌ಪುರದಲ್ಲಿ ಟೈಲರ್‌ನ ಹತ್ಯೆಯಾದ ದುರದೃಷ್ಟಕರ ಘಟನೆಗೆ ಆಕೆಯ ಆಕ್ರೋಶವೇ ಕಾರಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನೂಪುರ್ ಶರ್ಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸುಪ್ರೀಂ ಕೋರ್ಟ್, ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕಿರುವುದನ್ನು ಗಮನಿಸಿ ಇಡೀ ದೇಶದ ಕ್ಷಮೆ ಯಾಚಿಸುವಂತೆ ಸೂಚಿಸಿದೆ.