Connect with us

LATEST NEWS

ಶಬರಿಮಲೆ ಮಹಿಳೆಯರ ಪ್ರವೇಶಕ್ಕೆ ಯಾವುದೇ ನಿರ್ಬಂಧವಿಲ್ಲ – ಮರು ಪರಿಶೀಲನಾ ಅರ್ಜಿ ವಿಚಾರಣೆಗೆ ಸಮ್ಮತಿಸಿದ ಸುಪ್ರಿಂಕೋರ್ಟ್

ಶಬರಿಮಲೆ ಮಹಿಳೆಯರ ಪ್ರವೇಶಕ್ಕೆ ಯಾವುದೇ ನಿರ್ಬಂಧವಿಲ್ಲ – ಮರು ಪರಿಶೀಲನಾ ಅರ್ಜಿ ವಿಚಾರಣೆಗೆ ಸಮ್ಮತಿಸಿದ ಸುಪ್ರಿಂಕೋರ್ಟ್

ನವದೆಹಲಿ ನವೆಂಬರ್ 13: ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷದ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ, ಸುಪ್ರೀಂಕೋರ್ಟ್​ ನೀಡಿದ್ದ ತೀರ್ಪಿಗೆ ವಿರೋಧ ವ್ಯಕ್ತಪಡಿಸಿ, ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.

ಸುಪ್ರೀಂಕೋರ್ಟ್​ ತೀರ್ಪಿನ ಮರುಪರಿಶೀಲನೆಗೆ ಶಬರಿಮಲೆ ದೇವಸ್ವಂ ಆಡಳಿತ ಮಂಡಳಿ ಸೇರಿದಂತೆ ಇತರ ಸಂಘಟನೆಗಳ ಸುಮಾರು 49 ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಅರ್ಜಿಯ ವಿಚಾರಣೆಯನ್ನು ಇಂದು ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೋಯ್​ ನೇತೃತ್ವದ ಪೀಠ ಕೈಗೆತ್ತಿಕೊಂಡಿದೆ. ವಿಚಾರಣೆಯನ್ನು ಮುಂದಿನ ವರ್ಷ ಜನವರಿ 22ಕ್ಕೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧವಿಲ್ಲ.

ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ, ಸುಪ್ರೀಂಕೋರ್ಟ್​ ನೀಡಿದ್ದ ತೀರ್ಪಿಗೆ ಭಕ್ತರು ಮತ್ತು ಹಿಂದೂಪರ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಅಕ್ಟೋಬರ್​ನಲ್ಲಿ ಆರು ದಿನ ತಿಂಗಳ ಪೂಜೆಗಾಗಿ ದೇಗುಲದ ಬಾಗಿಲು ತೆರೆದಾಗ, ಭಕ್ತರು ಮತ್ತು ಹಿಂದುಪರ ಸಂಘಟನೆಗಳು ದೇಗುಲ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿ, ಮಹಿಳೆಯರು ದೇವಸ್ಥಾನ ಪ್ರವೇಶಿಸದಂತೆ ತಡೆ ಹಾಕಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *