Connect with us

    KARNATAKA

    ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್: ಮಾಜಿ ಸಂಸದನಿಗೆ ಇನ್ನು 6 ತಿಂಗಳು ಜೈಲೇ ಗತಿ..!

    ಹಾಸನ :  ಅತ್ಯಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ  ಮಾಜಿ ಸಂಸದ ಪ್ರಜ್ವಲ್ ರೇವಣ್ಣರ  ಜಾಮೀನು ಅರ್ಜಿ ಸುಪ್ರಿಂ ಕೋರ್ಟಿನಲ್ಲೂ ವಜಾಗೊಂಡಿದ್ದು ಸದ್ಯ ಮಾಜಿ ಸಂಸದನಿಗೆ ಜೈಲೇ ಗತಿಯಾಗಿದೆ.

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ಪೀಠವು ‘ಆರೋಪಿ ಸೋ ಪವರ್ ಫುಲ್’ ಎಂದು ಹೇಳಿ ಅರ್ಜಿ ವಜಾಗೊಳಿಸಿತು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಕೇಸಿನಲ್ಲಿ ಐದಾರು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಹಾಸನದಲ್ಲಿ ಅವರ ಮನೆ ಕೆಲಸದ ಮಹಿಳೆ, ಜೆಡಿಎಸ್ ಕಾರ್ಯಕರ್ತರ ಮೇಲೆ ಅತ್ಯಾಚಾರ ಮಾಡಿದ್ದಾರೆಂದು ಕೇಸ್ ದಾಖಲಾಗಿತ್ತು. ಈಗಾಗಲೇ ಅತ್ಯಾಚಾರ ಕೇಸಿಗೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ.  ಈ ಪ್ರಕರಣದಲ್ಲಿ ಬಂಧವಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ, ಜಾಮೀನಿನ ಮೇಲೆ ಹೊರಬರಲು ಶತಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಸ್ಥಳೀಯ ನ್ಯಾಯಾಲಯ ಮತ್ತು ಹೈಕೋರ್ಟ್‌ನಿಂದ ಜಾಮೀನು ನಿರಾಕರಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ, ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಿ ಜಾಮೀನು ಪಡೆದುಕೊಂಡು ಬರಬಹುದು ಎಂದು ನಿರೀಕ್ಷೆ ಮಾಡಿದ್ದರು

    ಈ ಹಿನ್ನೆಲೆಯಲ್ಲಿ ಭಾರತದ ಪ್ರಭಾವಿ ವಕೀಲರಲ್ಲಿ ಒಬ್ಬರಾದ ಮುಕುಲ್ ರೋಹಟಗಿ ಅವರ ನೇತೃತ್ವದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಪ್ರಜ್ವಲ್ ಪರ ವಕೀಲರಿಗೆ ಹೆಚ್ಚಿನ ವಾದ ಮಂಡಿಸಲು ಅವಕಾಶವನ್ನೇ ನೀಡಲಿಲ್ಲ. ಅರ್ಜಿ ಕೈಗೆತ್ತಿಕೊಳ್ಳುತ್ತಿದ್ದಂತೆ ವಕೀಲ ಮುಕುಲ್ ರೋಹಟಗಿ ಅವರು ತಮ್ಮ ಕಕ್ಷಿದಾರರ ಪರ ಗಂಭೀರ ಆರೋಪದ ಬಗ್ಗೆ 2-3 ಅಂಶಗಳಿವೆ. ದೂರಿನಲ್ಲಿ 376 (ಅತ್ಯಾಚಾರ) ವಿಷಯದ ಬಗ್ಗೆ ಮಾತನಾಡುವುದಿಲ್ಲ ಎಂದರು. ಆಗ ನ್ಯಾಯಮೂರ್ತಿ ತ್ರಿವೇದಿ ಅವರು ಆರೋಪ ಪಟ್ಟಿ ಸಲ್ಲಿಕೆ ಆಗಿದೆಯೇ? ಎಂದು ಪ್ರಶ್ನೆ ಮಾಡಿದರು. ವಕೀಲ ರೋಹಟಗಿ ಹೌದು ಎಂದರು. ಇದಾದ ತಕ್ಷಣವೇ ನ್ಯಾಯಮೂರ್ತಿಗಳು ಆರೋಪಿ ತುಂಬಾ ಪ್ರಭಾವಶಾಲಿ ಆಗಿದ್ದಾರೆ. ಅರ್ಜಿ ವಜಾಗೊಳಿಸಲಾಗಿದೆ ಎಂದು ಹೇಳಿ ಆದೇಶ ನೀಡಿದರು. ಇನ್ನು ಪ್ರಜ್ವಲ್ ರೇವಣ್ಣಗೆ ಜಾಮೀನು ನಿರಾಕರಣೆ ಮಾಡಿರುವುದು ಖಚಿತ ಆಗುತ್ತಿದ್ದಂತೆ ಬೇರೆ ವಾದ ಮಂಡಿಸದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ನಾವು 6 ತಿಂಗಳ ನಂತರ ಮತ್ತೆ ಅರ್ಜಿ ಸಲ್ಲಿಸಬಹುದೇ? ಎಂದು ಪ್ರಶ್ನೆ ಮಾಡಿದರು. ಆದರೆ, ಇದಕ್ಕೆ ನ್ಯಾಯಮೂರ್ತಿಗಳು ನಾವು ಏನನ್ನೂ ಹೇಳುವುದಿಲ್ಲ ಎಂದು ಕಡ್ಡಿ ತುಂಡರಿಸಿದಂತೆ ಆದೇಶ ಹೊರಡಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *