Connect with us

    LATEST NEWS

    ಸುಪ್ರೀಂ ದ್ವಿಸದಸ್ಯ ಪೀಠದಲ್ಲಿ ಭಿನ್ನ ತೀರ್ಪು.. ಹಿಜಬ್ ವಿವಾದ ವಿಸ್ತ್ರತ ಪೀಠಕ್ಕೆ

    ನವದೆಹಲಿ ಅಕ್ಟೋಬರ್ 13: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠ ಇಂದು ತನ್ನ ತೀರ್ಪು ಪ್ರಕಟಿಸಿದ್ದು, ದ್ವಿಸದಸ್ಯ ಪೀಠದಲ್ಲಿ ಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನಲೆ ಅರ್ಜಿ ತ್ರಿಸದಸ್ಯ ಪೀಠ ಅಥವಾ ಸಂವಿಧಾನ ಪೀಠದಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.


    ನ್ಯಾ. ಹೇಮಂತ್‌ ಗುಪ್ತಾ ಅವರು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದರೆ ನ್ಯಾ. ಸುಧಾಂಶು ಧೂಲಿಯಾ ಅವರು ಕರ್ನಾಟಕ ಹೈಕೋರ್ಟ್‌ ಆದೇಶವನ್ನು ವಜಾಗೊಳಿಸಿದ್ದಾರೆ.


    ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯ ತಳೆದರು. ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಸ್ತೃತ ಪೀಠ ರಚಿಸುವಂತೆ ನ್ಯಾಯಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಮಾಡಿತು. ಅಗತ್ಯ ಧಾರ್ಮಿಕ ಪದ್ಧತಿ ಕುರಿತು ವಿವಾದ ಸೃಷ್ಟಿಸುವ ಅಗತ್ಯ ಇರಲಿಲ್ಲ. ಮತ್ತು ಹೈಕೋರ್ಟ್‌ ತಪ್ಪು ನಿರ್ಧಾರ ಕೈಗೊಂಡಿದೆ ಎಂದು ಸುಧಾಂಶು ಧುಲಿಯಾ ಅಭಿಪ್ರಾಯಪಟ್ಟರು. ಹಿಜಾಬ್‌ ಧರಿಸುವುದು ಆಯ್ಕೆಗೆ ಬಿಟ್ಟಿದ್ದು. ಅದಕ್ಕಿಂತ ಹೆಚ್ಚೂ ಇಲ್ಲ ಕಡಿಮೆಯೂ ಇಲ್ಲ ಎಂದಿರುವ ಅವರು, ಇಂತಹ ನಿರ್ಬಂಧಗಳನ್ನು ಹೇರುವ ಮೂಲಕ ನಾವು ವಿದ್ಯಾರ್ಥಿನಿಯರ ಜೀವನ ಸುಧಾರಿಸುತ್ತಿದ್ದೇವೆಯೇ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿದೆ ಎಂದರು.

    ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸಿ ಅಂತಿಮ ತೀರ್ಪು ಹೊರಬರುವವರೆಗೆ ಹಿಜಾಬ್‌ ಕುರಿತು ಕರ್ನಾಟಕ ಹೈಕೋರ್ಟ್‌ ನೀಡಿರುವ ಆದೇಶ ಜಾರಿಯಲ್ಲಿರಲಿದೆ. 10 ದಿನಗಳ ಕಾಲ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಸೆಪ್ಟೆಂಬರ್‌ 22ರಂದು ತೀರ್ಪನ್ನು ಕಾಯ್ದಿರಿಸಿತ್ತು. ಗುರುವಾರ ಬೆಳಿಗ್ಗೆ 10.30ಕ್ಕೆ ತೀರ್ಪನ್ನು ಪ್ರಕಟಿಸಿತು.

    Share Information
    Advertisement
    Click to comment

    You must be logged in to post a comment Login

    Leave a Reply