LATEST NEWS
ರೋಹಿಣಿ ಸಿಂಧೂರಿ V/s ರೂಪಾ – ನಿಮ್ಮ ಗಲಾಟೆ ನಿಲ್ಲಿಸಿ ಸಂಧಾನ ಮಾಡಿಕೊಳ್ಳಿ ಎಂದ ಸುಪ್ರಿಂಕೋರ್ಟ್
ನವದೆಹಲಿ ಮೇ 08: ಕರ್ನಾಟಕದ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ಗಲಾಟೆ ಬಗ್ಗೆ ಸುಪ್ರೀಂಕೋರ್ಟ್ ಸಲಹೆಯನ್ನು ನೀಡಿದ್ದರೂ ಇಬ್ಬರು ಆರೋಪಗಳನ್ನು ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಮಂಗಳವಾರ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.
ಐಪಿಎಸ್ ಅಧಿಕಾರಿ ರೂಪಾ ಅವರು ಮಾಡಿರುವ ಆರೋಪಿಗಳ ಮೇಲೆ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕ್ ಮತ್ತು ಪಂಕಜ್ ಮಿತ್ತಲ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಉಭಯ ಪಕ್ಷಕಾರರು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ.
ಕಳೆದ ಡಿಸೆಂಬರ್ 15ರಂದು ಪ್ರಕರಣಕ್ಕೆ ತಡೆ ನೀಡಿದ್ದ ಸರ್ವೋಚ್ಚ ನ್ಯಾಯಾಲಯವು ಮಾಧ್ಯಮಗಳಲ್ಲಿ ಮಾತನಾಡದಂತೆ ಉಭಯ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಅಲ್ಲದೇ, ವಿವಾದ ಬಗೆಹರಿಸಿಕೊಳ್ಳಲು ಸಂಧಾನಕ್ಕೆ ಮುಂದಾಗುವಂತೆ ಸಲಹೆ ನೀಡಿತ್ತು.
ಸಿಂಧೂರಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಸಿಂಧೂರಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಬಯಸಿಲ್ಲ. ಪರಿಹಾರ ಸಾಧ್ಯತೆಯ ಬಗ್ಗೆ ಸಿಂಧೂರಿ ಜೊತೆ ಚರ್ಚಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.