Connect with us

FILM

ಕಮಲ್ ಹಾಸನ್ ಗೆ ಕ್ಷಮೆ ಕೇಳು ಎಂದು ಹೇಳವುದು ಹೈಕೋರ್ಟ್​ನ ಕೆಲಸ ಅಲ್ಲ – ಸುಪ್ರೀಂಕೋರ್ಟ್

ನವದೆಹಲಿ ಜೂನ್ 17: ಕನ್ನಡದ ವಿರುದ್ದ ಹೇಳಿಕೆ ನೀಡಿ ಕರ್ನಾಟಕದಲ್ಲಿ ಸಿನೆಮಾ ಬಿಡುಗಡೆಯಾಗದಂತೆ ತೊಂದರೆ ತಂದುಕೊಂಡಿದ್ದ ಕಮಲ್ ಹಾಸನ್ ಗೆ ಇದೀಗ ಸುಪ್ರೀಂಕೋರ್ಟ್ ನಲ್ಲಿ ರಿಲೀಪ್ ಸಿಕ್ಕಿದೆ. ಕಮಲ್ ಹಾಸನ್ ಸಿನೆಮಾ ಥಗ್ ಲೈಫ್ ಸಿನೆಮಾ ರಾಜ್ಯದಲ್ಲಿ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.


ಥಗ್ ಲೈಫ್ ಸಿನೆಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಬೇಕೆಂದು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಗೂಂಡಾಗಳ ಗುಂಪು, ಯಾವ ಸಿನಿಮಾ ಪ್ರದರ್ಶಿಸಬೇಕು, ಯಾವುದನ್ನು ಪ್ರದರ್ಶಿಸಬಾರದು ಎಂದು ನಿರ್ಧರಿಸಲಾಗದು’ ಎಂದು ಕಠಿಣ ಪದಗಳಲ್ಲಿಯೇ ಹೇಳಿದೆ ಸುಪ್ರೀಂಕೋರ್ಟ್. ‘ಯಾರಾದರೂ ಒಂದು ಹೇಳಿಕೆ ನೀಡಿದರೆ ನೀವು ಅದಕ್ಕೆ ವಿರುದ್ಧವಾದ ಹೇಳಿಕೆ ನೀಡಿ, ಆದರೆ ಚಿತ್ರಮಂದಿರಗಳನ್ನು ಸುಟ್ಟು ಹಾಕುತ್ತೀವೆ ಎಂದು ಬೆದರಿಸುವುದು ಕಾನೂನಿಗೆ ವಿರುದ್ಧ. ಕಮಲ್ ಹಾಸನ್ ಹೇಳಿಕೆಯನ್ನು ಒಪ್ಪುವುದು ಒಪ್ಪದೇ ಇರುವುದು ಕರ್ನಾಟಕದ ಜನರಿಗೆ ಬಿಟ್ಟ ವಿಷಯ ಆದರೆ ಮೂಲಭೂತ ಹಕ್ಕುಗಳ ರಕ್ಷಣೆ ಆಗಲೇಬೇಕು’ ಎಂದಿದೆ.

ಬೆಂಗಳೂರಿನ ಜಾಗೃತ ಜನತೆಗೆ ಕಮಲ್ ಹಾಸನ್ ಹೇಳಿಕೆ ತಪ್ಪು ಎನಿಸಿದಾದಲ್ಲಿ, ಯಾವುದು ಸರಿಯೋ ಅದನ್ನು ಹೇಳಲಿ. ಆದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇವೆಂದು ಬೆದರಿಸುವುದು ಏಕೆ?’ ಎಂದು ಸುಪ್ರೀಂ ಪ್ರಶ್ನಿಸಿದೆ. ರಾಜ್ಯ ಹೈಕೋರ್ಟ್​ ಸೂಚನೆಯನ್ನು ಟೀಕೆ ಮಾಡಿರುವ ಸುಪ್ರೀಂಕೋರ್ಟ್, ‘ವ್ಯವಸ್ಥೆಯಲ್ಲೇ ತಪ್ಪಿದೆ ಎನಿಸುತ್ತದೆ. ಒಬ್ಬ ವ್ಯಕ್ತಿ ತಪ್ಪು ಹೇಳಿಕೆ ನೀಡಿದ್ದಾರೆ, ಆದರೆ ಎಲ್ಲರೂ ಒಟ್ಟಾಗಿ ಅದರ ವಿರುದ್ಧ ನಿಂತಂತೆ ಕಾಣುತ್ತಿದೆ. ಕ್ಷಮೆ ಕೇಳು ಎಂದು ಹೈಕೋರ್ಟ್ ಹೇಳುತ್ತಿದೆ, ಅದು ಹೈಕೋರ್ಟ್​ನ ಕೆಲಸ ಅಲ್ಲ’ ಎಂದಿದೆ.

Share Information
Continue Reading
Advertisement
4 Comments

4 Comments

    Leave a Reply

    Your email address will not be published. Required fields are marked *