LATEST NEWS
ಬಟ್ಟೆ ಮೇಲಿನಿಂದ ಅಪ್ರಾಪ್ತೆ ಖಾಸಗಿ ಅಂಗ ಮುಟ್ಟುವುದು ಲೈಂಗಿಕ ಕಿರುಕುಳ ಅಲ್ಲ ಎಂದು ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ ಜನವರಿ 27: ಬಟ್ಟೆಯ ಮೇಲಿನಿಂದ ಅಪ್ರಾಪ್ತೆಯ ಖಾಸಗಿ ಅಂಗಗಳನ್ನು ಮುಟ್ಟುವುದು ಪೋಕ್ಸೋ ಕಾಯ್ದೆಯಡಿ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಪೋಕ್ಸೊ ಪ್ರಕರಣವೊಂದರಲ್ಲಿ ನೇರ ಶಾರೀರಿಕ ಸಂಪರ್ಕ ಆಗಿರಲಿಲ್ಲ ಎಂಬ ಆಧಾರದ ಮೇಲೆ ಹೈಕೋರ್ಟ್ ಆರೋಪಿಯನ್ನು ಖುಲಾಸೆಗೊಳಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್ ಆರೋಪಿಯ ಖುಲಾಸೆಯನ್ನು ತಡೆ ಹಿಡಿದಿದ್ದು ಈ ಸಂಬಂಧ ಸಂಪೂರ್ಣ ವಿವರ ನೀಡಬೇಕೆಂದು ಹೈಕೋರ್ಟ್ ಗೆ ಕೇಳಿದೆ.
ಸಿಜೆಐ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಆರೋಪಿಯನ್ನು ಖುಲಾಸೆಗೊಳಿಸುವುದನ್ನು ತಡೆಹಿಡಿದಿದೆ. ಪ್ರಕರಣದ ಬಗ್ಗೆ ತುರ್ತು ಪ್ರಸ್ತಾಪವನ್ನು ಮಾಡಿದ ವೇಣುಗೋಪಾಲ್, ಹೈಕೋರ್ಟ್‌ನ ತೀರ್ಪಿನ ಬಗ್ಗೆ ಸುಗೊ ಮೊಟು ಕಾಗ್ನಿಜೆನ್ಸ್ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು.
ಬಾಂಬೆ ಹೈಕೋರ್ಟ್ ನ ಆದೇಶದ ವಿರುದ್ಧ ಯೂತ್ ಬಾರ್ ಅಸೋಸಿಯೇಷನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಪ್ರಕರಣ ಸಂಬಂಧ ಉತ್ತರಿಸುವಂತೆ ಮಹಾರಾಷ್ಟ್ರ ಸರ್ಕಾರ ಮತ್ತು ಆರೋಪಿಗಳಿಗೆ ನೋಟಿಸ್ ನೀಡಿದೆ