LATEST NEWS
ಕ್ಯಾಂಪಸ್ ನಲ್ಲಿ ಹಿಜಾಬ್ ನಿಷೇಧಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ – ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ
ನವದೆಹಲಿ ಅಗಸ್ಟ್ 09: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಬಾಗಶಃ ತಡೆಯಾಜ್ಞೆ ನೀಡಿದ್ದು, ತನ್ನ ಆದೇಶವನ್ನು ದುರ್ಬಳಕೆ ಮಾಡಿಕೊಂಡರೆ ನ್ಯಾಯಾಲಯ ಸಂಪರ್ಕಿಸಲು ಕಾಲೇಜಿಗೆ ತಿಳಿಸಿದೆ.
ಮುಂಬೈ ಎಜುಕೇಶನಲ್ ಸೊಸೈಟಿ ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್ ನ್ನು ನಿಷೇಧಿಸಿತ್ತು. ಇದನ್ನು ಬಾಂಬೆ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಈ ವೇಳೆ ಹೈಕೋರ್ಟ್ ನಾನು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಆದೇಶ ನೀಡಿತ್ತು. ಕಾಲೇಜುಗಳಲ್ಲಿ ಹಿಜಾಬ್, ಬುರ್ಖಾ ನಿಷೇಧಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ.
‘ಬುರ್ಖಾ, ಹಿಜಾಬ್’ ಕುರಿತ ತನ್ನ ಮಧ್ಯಂತರ ಆದೇಶವನ್ನು ದುರ್ಬಳಕೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ದುರ್ಬಳಕೆಯ ಸಂದರ್ಭದಲ್ಲಿ ನ್ಯಾಯಾಲಯ ಸಂಪರ್ಕಿಸಲು ಮುಂಬೈ ಕಾಲೇಜಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ತರಗತಿಯೊಳಗೆ ವಿದ್ಯಾರ್ಥಿನಿಯರು ಯಾವುದೇ ಬುರ್ಖಾ ಧರಿಸಲು ಮತ್ತು ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆ ಅನುಮತಿ ಇಲ್ಲ ಎಂದು ಉನ್ನತ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.