Connect with us

    LATEST NEWS

    ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಲಗಾಮು – ಅಧಿಕಾರಿಗಳು ಜಡ್ಜ್ ಆಗಲು ಸಾಧ್ಯವಿಲ್ಲ

    ದೆಹಲಿ ನವೆಂಬರ್ 13: ಕ್ರಿಮಿನಲ್ ಕೇಸ್ ಆರೋಪ ಎದುರಿಸುತ್ತಿರುವ ಆರೋಪಿಗಳ ಮನೆಗಳನ್ನು ಕೆಡುವುತ್ತಿರುವ ಬಿಜೆಪಿ ಆಡಳಿತದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿದ್ದು, ಬುಲ್ಡೋಜರ್ ನ್ಯಾಯದ ಹೆಸರಿನಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆಗೆ ಬ್ರೇಕ್‌ ಬಿದ್ದಿದೆ. ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನಿಡಿದೆ.

    ಬಿಜೆಪಿ ನೇತೃತ್ವದ ಸರಕಾರವಿರುವ ರಾಜ್ಯಗಳಲ್ಲಿ ಯಾವುದೇ ರೀತಿಯ ಅಪರಾಧ ಪ್ರಕರಣಗಳು ನಡೆದ ಕೂಡಲೇ ಅಲ್ಲಿನ ಸ್ಥಳೀಯ ಆಡಳಿತ ಆರೋಪಿಗಳ ಮನೆಗಳನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸುತ್ತಿತ್ತು. ಈ ಕಾರ್ಯಾಚರಣೆ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು, ಇದೀಗ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ಈ ಪ್ರಕರಣ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಕಟ್ಟಡಗಳ ತೆರವಿಗೆ ಮಾರ್ಗಸೂಚಿ ಪ್ರಕಟಿಸಿದೆ.


    ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ, ಬುಲ್ಡೋಜರ್ ಕಾರ್ಯಚರಣೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿತು. ಕಾರ್ಯಾಂಗವು ನ್ಯಾಯಾಂಗವನ್ನು ಅತಿಕ್ರಮಿಸಲು ಸಾಧ್ಯವಿಲ್ಲ, ಆರೋಪಿಯನ್ನು ಅಪರಾಧಿಯನ್ನು ಎಂದು ನಿರ್ಧರಿಸಲು ಅಧಿಕಾರಿಗಳು ನ್ಯಾಯಾಧೀಶರಲ್ಲ. ಆರೋಪಿಯ ತಪ್ಪನ್ನು ಪೂರ್ವಾಗ್ರಹಕ್ಕೆ ಒಳಪಡಿಸಬಾರದು. ಕೇವಲ ಆರೋಪದ ಮೇಲೆ ನಾಗರಿಕರ ಮನೆಯನ್ನು ಅನಿಯಂತ್ರಿತವಾಗಿ ಕೆಡವುವುದು ಅಸಾಂವಿಧಾನಿಕ ಎಂದು ನ್ಯಾ. ಬಿ.ಆರ್ ಗವಾಯಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿ ಹಲವು ಮಾರ್ಗಸೂಚಿ ಪ್ರಕಟಿಸಿದರು.

    ಮನೆ ಎನ್ನುವುದು ಅದೊಂದು ಕಟ್ಟಡವಲ್ಲ, ಅದೊಂದು ಸರಕ್ಷತೆ, ಭವಿಷ್ಯದ ನಿರೀಕ್ಷೆ. ಒಬ್ಬ ವ್ಯಕ್ತಿ ಮಾತ್ರ ಅಪರಾಧದ ಆರೋಪಿಯಾಗಿದ್ದರೆ ಇಡೀ ಕುಟುಂಬ ಸದಸ್ಯರ ಆಶ್ರಯವನ್ನು ಕಿತ್ತುಕೊಳ್ಳುವುದು ಅಸಾಂವಿಧಾನಿಕ. ಇಂತಹ ಅಧಿಕಾರವನ್ನು ಅಧಿಕಾರಿಗಳಿಗೆ ಹೇಗೆ ನೀಡಲು ಸಾಧ್ಯ. ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡರೆ ಅಧಿಕಾರಿಗಳನ್ನು ಉಳಿಸಲಾಗುವುದಿಲ್ಲ, ಅದರ ಹೊಣೆಗಾರಿಕೆ ಕ್ರಮಗಳನ್ನು ಎದರುರಿಸಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆಯನ್ನು ನೀಡಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *