LATEST NEWS
ಸುರತ್ಕಲ್ ಟೋಲ್ ಕೇಂದ್ರದ ಗುತ್ತಿಗೆ ನವೀಕರಿಸದಂತೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗದಿಂದ ಮನವಿ
ಸುರತ್ಕಲ್ ಟೋಲ್ ಕೇಂದ್ರದ ಗುತ್ತಿಗೆ ನವೀಕರಿಸದಂತೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗದಿಂದ ಮನವಿ
ಮಂಗಳೂರು ಅಕ್ಟೋಬರ್ 25: ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಅಕ್ರಮ ಟೋಲ್ ಕೇಂದ್ರದಲ್ಲಿ ಟೋಲ್ ಸಂಗ್ರಹದ ಗುತ್ತಿಗೆ ನವೆಂಬರ್ 15 ಮುಕ್ತಾಯ ಗೊಳ್ಳಲ್ಲಿದ್ದು. ಯಾವುದೇ ಕಾರಣಕ್ಕೂ ಟೋಲ್ ಗುತ್ತಿಗೆಯನ್ನು ನವೀಕರಿಸದೆ, ಹೆದ್ದಾರಿ ಪ್ರಾಧಿಕಾರ ತೆಗೆದು ಕೊಂಡ ತೀರ್ಮಾನದಂತೆ ಟೋಲ್ ಕೇಂದ್ರವನ್ನು ಅಲ್ಲಿಂದ ತೆರವುಗೊಳಿಸಬೇಕು ಹಾಗೂ ಹೆದ್ದಾರಿ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಶಿಶು ಮೋಹನ್ ಗೆ ಮನವಿ ಸಲ್ಲಿಸಿತು.
ಹೆದ್ದಾರಿ ಗುಂಡಿಗಳಿಂದ ಅಪಾಯಕಾರಿ ಸ್ಥಿತಿಗೆ ತಲುಪಿರುವ ಸುರತ್ಕಲ್, ನಂತೂರು ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಬೇಕು, ದುರ್ಬಲಗೊಂಡು ಸಂಚಾರಕ್ಕೆ ಅಯೋಗ್ಯಗೊಂಡಿರುವ ಕೂಳೂರು ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.