Connect with us

    DAKSHINA KANNADA

    ಸುರತ್ಕಲ್:‌ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ, ಪ್ರದೇಶದಲ್ಲಿ ಬಿಗಿ ಭದ್ರತೆ..!

    ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಲಾಗಿದೆ.

    ರವಿವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು  ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿ ಗಳಿಗೆ ಕಲ್ಲು ತೂರಾಟದಿಂದ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ  ಧಾವಿಸಿ, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.  ಇಂದು ಈದ್ ಮಿಲಾದ್  ಹಬ್ಬವೂ ಇರುವ ಕಾರಣ ಸುರತ್ಕಲ್ ಪ್ರದೇಶ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply