Connect with us

  DAKSHINA KANNADA

  ಸುರತ್ಕಲ್: ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು

  ಸುರತ್ಕಲ್, ಜುಲೈ 05: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.

  ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದಿದ್ದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

  ಸಮೀಪದಲ್ಲಿಯೇ ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆಯೊಂದು ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಒಂದು ಭಾಗ ಸಿಲುಕಿಕೊಂಡ ಪರಿಣಾಮ ಭಾರಿ ಜೀವ ಹಾನಿ ತಪ್ಪಿದೆ.

  ಸುಂಟರಗಾಳಿಗೆ ವಿವಿಧಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯಕದಲ್ಲಿ ತೊಡಗಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply