Connect with us

LATEST NEWS

ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣ ಮತ್ತೆ ಇಬ್ಬರ ಬಂಧನ

ಮಂಗಳೂರು ನವೆಂಬರ್ 3: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.


ಬಂಧಿತರನ್ನು ಪ್ರತೀಕ್ ಬೆಳ್ತಂಗಡಿ ಹಾಗೂ ಜಯೇಶ್ ಯಾನೇ ಸಚ್ಚು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಸುರೇಂದ್ರ ಬಂಟ್ವಾಳರನ್ನು ಹತ್ಯೆ ಮಾಡಿದ ಪ್ರಮುಖ ಆರೋಪಿಗಳಾದ ಸತೀಶ್ ಮತ್ತು ಗಿರೀಶ್ ನಿಗೆ ತಲೆಮರೆಸಿಕೊಳ್ಳಲು ಆಶ್ರಯ,ವಾಹನ ಮತ್ತು ಹಣದ ವ್ಯವಸ್ಥೆ ಮಾಡಿದ್ದರು. ಈ ಹಿನ್ನಲೆ ಇಬ್ಬರನ್ನು ಬಂಧಿಸಿದ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಭಂಡಾರಿಬೆಟ್ಟುವಿನ ವಸ್ತಿ ಅರ್ಪಾಟ್‌ಮೆಂಟ್‌ನಲ್ಲಿ ಸುರೇಂದ್ರ ಬಂಟ್ವಾಳ್‌ನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬಿಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 5 ವಿಶೇಷ ಪತ್ತೆ ತಂಡ ಪೊಲೀಸ ಇಲಾಖೆ ರಚಿಸಿತ್ತು. ಈಗಾಗಲೇ ಆರೋಪಿಗಳಾದ ಸತೀಶ್ ಕುಲಾಲ್, ಗಿರೀಶ್ ಕಿನ್ನಿಗೋಳಿ, ಆಕಾಶ್ ಭವವ್ ಶರಣ್, ವೆಂಕಟೇಶ್ ಪೂಜಾರಿ, ಪ್ರದೀಪ್, ಶರೀಫ್, ದಿವರಾಜ್, ರಾಜೇಶ್ ಮತ್ತು ಅನಿಲ್ ಪಂಪ್‌ವೆಲ್‌ನನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.