LATEST NEWS
ಸುರತ್ಕಲ್ – ಖಾಸಗಿ ಮತ್ತು ಸರಕಾರಿ ಬಸ್ ನಡುವೆ ಅಪಘಾತ – ಹಲವರಿಗೆ ಗಾಯ

ಸುರತ್ಕಲ್ ಮೇ 12: ಸರಕಾರಿ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ 30 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಮುಕ್ಕದಲ್ಲಿ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
