Connect with us

    LATEST NEWS

    ಸುರತ್ಕಲ್ – ಭಾರಿ ಮಳೆಗೆ ಹೆದ್ದಾರಿಯಲ್ಲೇ ಮಗುಚಿ ಬಿದ್ದ ಕೋಳಿ ಸಾಗಾಟದ ವಾಹನ

    ಸುರತ್ಕಲ್: ಜೂ,09 : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ 5.30 ರ ಸುಮಾರಿಗೆ ನಡೆದಿದೆ.


    ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕೋಳಿಯನ್ನು ತುಂಬಿಕೊಂಡು ಹೊರಟಿದ್ದ ಪಿಕಪ್ ವಾಹನವು ಇಂದು ಮುಂಜಾನೆ ಸುಮಾರು 5:30’ರ ಸಮಯಕ್ಕೆ ರಾಷ್ಟ್ರೀಯ ಹೆದ್ದಾರಿ 66’ರ ಹೊನ್ನಕಟ್ಟೆ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಡ್ಡಲಾಗಿ ಬಿದ್ದು ಕೋಳಿ ತುಂಬಿದ ಟ್ರೈಗಳು ರಸ್ತೆಯಲ್ಲೆ ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು,

    ಈ ಸಂದರ್ಭ ಕೆಲವು ಕಾಲ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಬಳಿಕ ಮಂಗಳೂರು ಉತ್ತರ ಸಂಚಾರಿ ಠಾಣೆಯ ಪೋಲೀಸರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸುವ ಮೂಲಕ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply