LATEST NEWS
ಸುರತ್ಕಲ್ – ಹೊಡೆದಾಟದ ಮಟ್ಟಕ್ಕೆ ಹೋದ ಸಣ್ಣ ಅಪಘಾತ….!!
ಮಂಗಳೂರು ಫೆಬ್ರವರಿ 09 : ಮಂಗಳೂರು ಹೊವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಕಾರು ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಸಹೋದರ ಆದಿಲ್ ನದ್ದಾಗಿದ್ದು, ಇದು ಬೈಕಿನಲ್ಲಿ ಹೋಗುತ್ತಿದ್ದ ನಾಗೇಶ್ ಎಂಬವರ ಬೈಕಿಗೆ ತಾಗಿತ್ತು. ಪರಿಣಾಮ ಬೈಕಿನಲ್ಲಿ ಹೋಗುತ್ತಿದ್ದ ನಾಗೇಶ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಾಯವಾಗಿದೆ. ಈ ವೇಳೆ ಎರಡು ಸಮುದಾಯದ ಜನ ಗುಂಪು ಸೇರಿ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಷಯ ತಿಳಿದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಅಲ್ಲ್ಲಿದ್ದ ಜನರನ್ನು ಚದುರಿಸಿದರು. ಬೈಕ್ ಸವಾರ ನಾಗೇಶ್ ಹಾಗೂ ಆದಿಲ್ ನ ಚಿಕ್ಕಪ್ಪ ಉಮರ್ ಫಾರೂಕ್ ಒಳರೋಗಿಯಾಗಿ ದಾಖಲಾಗಿದ್ದಾರೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಇಬ್ಬರು ಆರೋಪ – ಪ್ರತ್ಯಾರೋಪ ಮಾಡಿ ಸುರತ್ಕಲ್ ಠಾಣೆಯಲ್ಲಿ ದೂರು – ಪ್ರತಿ ದೂರು ನೀಡಿದ್ದಾರೆ.
You must be logged in to post a comment Login