LATEST NEWS
ಸುರತ್ಕಲ್ ನ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ
ಮಂಗಳೂರು ಮಾರ್ಚ್ 1: ಮಂಗಳೂರಿನ ಸಮೀಪದ ಸುರತ್ಕಲ್ ನ ವಸತಿಗೃಹವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸುರತ್ಕಲ್ ಠಾಣಾ ಪೊಲೀಸರು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹಳೆಯಂಗಡಿಯ ತೋಕುರು ನಿವಾಸಿ ತೋಕೂರು ಹರೀಶ್, ಹಾಗೂ ಬಂಟ್ವಾಳದ ಮೂಡ ನಡಗೋಡು ಗ್ರಾಮದ ನಿವಾಸಿ ಲೋಕನಾಥ್ ಫೂಜಾರಿ ಯಾನೆ ನವೀನ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಬಾಳ ಗ್ರಾಮದ ಬಿ.ಎ.ಎಸ್.ಎಫ್ ಫ್ಯಾಕ್ಟರಿಯ ಎದುರುಗಡೆಯ ಫೆರಾವೊ ಕಾಂಪ್ಲೇಕ್ಸ್ ನಲ್ಲಿರುವ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ ನ ರಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು. ಪೊಲೀಸ್ ದಾಳಿ ವೇಳೆ ಬೆಂಗಳೂರು ಉತ್ತರಹಳ್ಳಿಯ ನಿವಾಸಿ ಸಂತ್ರಸ್ತೆ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.