Connect with us

    LATEST NEWS

    ಸುರತ್ಕಲ್ – ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ ಎಂದು ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

    ಸುರತ್ಕಲ್ ಅಕ್ಟೋಬರ್ 25: ಯುವತಿಯೊಬ್ಬಳು ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು” ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.


    ಕಳೆದ ಕೆಲವು ದಿನಗಳ ಹಿಂದೆ ಯುವತಿಯ ಅಣ್ಣನಿಗೆ ಯುವಕ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ ಹಾಕಿದ್ದರು, “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಈ ಘಟನೆ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುರತ್ಕಲ್ ಪೊಲೀಸರು ಸದಾಶಿವನಗರದ ಶಾರಿಕ್‌ ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಶಕ್ಕೆ ಪಡೆದು ವಿಚಾರಣೆ ವೇಳೆ ಆರೋಪಿ ವಿರುದ್ಧ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಿಟ್ಟು ಕಳುಹಿಸಿದ್ದಾರೆ.

    ಈ ಬಳಿಕವೂ ಆರೋಪಿ ಯುವತಿಯ ಸಹೋದರಿನಿಗೆ ನಿರಂತರ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಡೆತ್​ನೋಟ್​ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಡೆತ್​​ನೋಟ್​ನಲ್ಲಿ “ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು” ಎಂದು ಡೆತ್​ನೋಟ್​ ಬರೆದಿದ್ದಾಳೆ.

    also Red this..

    ಸುರತ್ಕಲ್ : ಅಶ್ಲೀಲ ಮೆಸೇಜ್ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಯತ್ನ, ಪೊಲೀಸ್  ವೈಫಲ್ಯಕ್ಕೆ ಶಾಸಕ ಭರತ್ ಶೆಟ್ಟಿ ತೀವ್ರ ಆಕ್ರೋಶ

    Share Information
    Advertisement
    Click to comment

    You must be logged in to post a comment Login

    Leave a Reply