Connect with us

    LATEST NEWS

    ಡಿಸೆಂಬರ್ 1 ರಿಂದ ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ….!!

    ಮಂಗಳೂರು ನವೆಂಬರ್ 29: ಕೊನೆಗೂ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಸ್ಥಗಿತಕ್ಕೆ ದಕ್ಷಿಣಕನ್ನಡ ಜಿಲ್ಲಾದಿಕಾರಿ ಎಂ. ಆರ್ ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದು, ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ.


    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶದನ್ವಯ ಜಿಲ್ಲಾಧಿಕಾರಿಗಳು ಈ ಆದೇಶಿಸಿದ್ದಾರೆ. ಸುರತ್ಕಲ್ ನಲ್ಲಿ ಸ್ಥಗಿತಗೊಳಿಸಿ ಉಡುಪಿಯ ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

    ಈ ನಡುವೆ ಹೆಜಮಾಡಿ ಟೋಲ್ ಗೇಟ್ ದರ ಪರಿಷ್ಕರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್‌ಗೇಟ್ ಅನ್ನು ವಿಲೀನಗೊಳಿಸಿ ಹೆಚ್ಚುವರಿ ಶುಲ್ಕವನ್ನು ಹೆಜಮಾಡಿ ಟೋಲ್ ನಲ್ಲಿಯೇ ಸಂಗ್ರಹಿಸಲಾಗುತ್ತದೆ.

    Share Information
    Advertisement
    Click to comment

    You must be logged in to post a comment Login

    Leave a Reply