LATEST NEWS
ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿಗೆ ವ್ಯಾಪಕ ಬೆಂಬಲ
ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿಗೆ ವ್ಯಾಪಕ ಬೆಂಬಲ
ಮಂಗಳೂರು ಅಕ್ಟೋಬರ್ 20: ನಾಗರಿಕರ ಸತತ ಹೋರಾಟದ ಹೊರತಾಗಿಯೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕ ಸಂಗ್ರಹದ ಗುತ್ತಿಗೆ ನವೀಕರಣದ ಟೆಂಡರ್ ಕರೆದಿರುದನ್ನು ವಿರೋಧಿಸಿ, ಕೂಳೂರು ಹಳೆ ಸೇತುವೆಯನ್ನು ಪರ್ಯಾಯ ವ್ಯವಸ್ಥೆ ಇಲ್ಲದೆ ಮುಚ್ಚುವ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಖಂಡಿಸಿ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಅಕ್ಟೋಬರ್ 22 ರಿಂದ ಸುರತ್ಕಲ್ ಜಂಕ್ಷನ್ ನಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕಳೆದ ಸೆಪ್ಟಂಬರ್ 26 ರಂದು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ಸಂದರ್ಭ, ಅಕ್ಟೋಬರ್ 30 ಕ್ಕೆ ಟೋಲ್ ಸಂಗ್ರಹದ ಗುತ್ತಿಗೆಯ ಅವಧಿ ಮುಕ್ತಾಯಗೊಳ್ಳುತ್ತಿದ್ದು ಆ ನಂತರ ಟೋಲ್ ಗುತ್ತಿಗೆಯನ್ನು ನವೀಕರಿಸುವುದಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ಸಭೆಯಲ್ಲಿ ಸಂಸದರು ಭರವಸೆ ನೀಡಿದ್ದರು. ಆದರೆ ಈಗ ಮತ್ತೊಮ್ಮೆ ಟೋಲ್ ಗುತ್ತಿಗೆ ನವೀಕರಿಸುವ ಟೆಂಡರ್ ಪ್ರಕ್ರಿಯೆಗೆ ಹೆದ್ದಾರಿ ಪ್ರಾಧಿಕಾರ ಚಾಲನೆ ನೀಡಿದೆ.
ಆ ಮೂಲಕ ಅಕ್ರಮ ಟೋಲ್ ಗೇಟ್ ಮುಂದುವರಿಸಲು ಹೆದ್ದಾರಿ ಪ್ರಧಿಕಾರ ಮುಂದಾಗಿದೆ. ಈ ಪ್ರಕ್ರಿಯೆಗೆ ಸಂಸದ ನಳಿನ್ ಕುಮಾರ್ ಕಟೀಲ್ ನೇರ ಕಾರಣ ಎಂದು ಹೋರಾಟ ಸಮಿತಿ ಆರೋಪಿಸಿದೆ. ಹಾಗೂ ಅಕ್ಟೋಬರ್ 30 ರ ನಂತರ ಟೋಲ್ ಸಂಗ್ರಹ ಮುಂದುವರಿಸಬಾರದು, ರಾಜ್ಯ ಸರಕಾರದ ಪ್ರಸ್ತಾವನೆ ಜಾರಿಯಾಗಬೇಕು ಎಂಬ ಬೇಡಿಕೆ ಮುಂದಿಟ್ಟು ಅನಿರ್ಧಿಷ್ಟಾವಧಿ ದರಣಿ ನಡೆಸಲು ನಿರ್ಧರಿಸಿದೆ.