LATEST NEWS
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ 2ನೇ ದಿನಕ್ಕೆ

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ 2ನೇ ದಿನಕ್ಕೆ
ಮಂಗಳೂರು ಅಕ್ಟೋಬರ್ 23: ಸುರತ್ಕಲ್ ಟೋಲ್ ಗೇಟ್ ಗುತ್ತಿಗೆ ನವೀಕರಣ ವಿರೋಧಿಸಿ ಸುರತ್ಕಲ್ ನಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ನಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿರಿಸಿದೆ.
ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಮನಪಾ ಸದಸ್ಯರಾದ ರೇವತಿ ಪುತ್ರನ್, ದಯಾನಂದ ಶೆಟ್ಟಿ, dyfi ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಸಿಪಿಐಎಂ ಮುಖಂಡ ಸುನಿಲ್ ಕುಮಾರ್ ಬಜಾಲ್ ಮತ್ತಿತರರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು.
