ಮುಂಬೈ: ಭಾರತದ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ದೇವಿಶಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಸೂರ್ಯ ಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

“ಸಂತಸದಿಂದ ಹೆಣ್ಣುಮಗುವನ್ನು ಬರಮಾಡಿಕೊಂಡಿದ್ದೇವೆ” ಎಂದು ಸೂರ್ಯ ಕುಮಾರ್ ಬರೆದುಕೊಂಡಿದ್ದಾರೆ. ಕಾಲೇಜು ದಿನಗಳಿಂದಲೇ ಪ್ರೀತಿಸುತ್ತಿದ್ದ ಸೂರ್ಯ ಮತ್ತು ದೇವಿಶಾ ಅವರು 2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ವಿವಾಹವಾಗಿ ಸುಮಾರು 10 ವರ್ಷಗಳ ಬಳಿಕ ದಂಪತಿ ಮೊದಲ ಮಗುವನ್ನು ಬರಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಳೆ ಹರಿಸುತ್ತಿದ್ದಾರೆ.
ವಿಶೇಷವೆಂದರೆ, ದೇವಿಶಾ ಶೆಟ್ಟಿ ಅವರು ಕರ್ನಾಟಕದ ಉಡುಪಿ ಮೂಲದವರಾಗಿದ್ದು, ಅವರು ವೃತ್ತಿಪರ ಭರತನಾಟ್ಯ ನೃತ್ಯಗಾರ್ತಿ ಹಾಗೂ ನೃತ್ಯ ತರಬೇತುದಾರರಾಗಿದ್ದಾರೆ. ನೃತ್ಯದ ಜೊತೆಗೆ ಅವರು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.