Connect with us

    KARNATAKA

    ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್

    ಬೆಂಗಳೂರು, ಜೂನ್ 07: ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)​ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    ಬೆಂಗಳೂರಿನಲ್ಲಿ ತಾಲಿಕ್ ಎಂದು ಹೆಸರು ಬದಲಿಸಿ ಓಡಾಡ್ತಿದ್ದ ಉಗ್ರ ತಾಲಿಬ್, ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್​ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು.

    ಉಗ್ರ ತಾಲಿಬ್ ಹುಸೇನ್​ಗೆ ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷಾ ಆಶ್ರಯ ನೀಡಿದ್ದಾನೆ. ಅಷ್ಟೇ ಅಲ್ಲದೆ ಅಲ್ಲಿನ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದೆ. ಸದ್ಯ ಉಗ್ರ ತಾಲಿಬ್​ನನ್ನು ಪೊಲೀಸರು ಬಂಧಿಸಿ ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ.

    ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಶಂಕಿತರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ. ಹಿಂದೆಯೂ ಭಟ್ಕಳ, ಶಿರಸಿಯಲ್ಲಿ ಶಂಕಿತರನ್ನು ಬಂಧಿಸಲಾಗಿತ್ತು. ಕಾಶ್ಮೀರ ಪೊಲೀಸರಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದರು.

    ಉಗ್ರನ ಬಂಧನದ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಜಮ್ಮು-ಕಾಶ್ಮೀರ ಪೊಲೀಸರು ಉಗ್ರನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನಮ್ಮ ಜೊತೆ ಜಮ್ಮು ಪೊಲೀಸರು ಸಂಪರ್ಕದಲ್ಲಿದ್ದಾರೆ. ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ವಿನಿಮಯವಾಗಿಲ್ಲ. ಮುಂದಿನ ಹಂತದಲ್ಲಿ ನಮ್ಮ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply