Connect with us

    KARNATAKA

    ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರು- ಚಾಲಕ ಸಜೀವ ದಹನ

    ನೆಲಮಂಗಲ ಡಿಸೆಂಬರ್ 26: ಚಲಿಸುತ್ತಿದ್ದ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಚಾಲಕ ಸಜೀವ ದಹನವಾಗಿದ್ದಾನೆ.


    ನೋಡ ನೋಡುತ್ತಿದ್ದಂತೆ ಮಾರುತಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಬೆಂಕಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಆದರೆ ಬೆಂಕಿ ಆವರಿಸಿಕೊಂಡ ಪರಿಣಾಮ ಸಜೀವ ದಹನವಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಘಟನೆಯಿಂದ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್​​ ಉಂಟಾಗಿತ್ತು. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply