LATEST NEWS
ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದರೆ ಹೋರಾಟ – ಕರಾವಳಿಯ ಸಾಧುಸಂತರ ಎಚ್ಚರಿಕೆ

ಮಂಗಳೂರು ಜುಲೈ 01: ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಕರಾವಳಿಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ಕುರಿತಂತೆ ನಾವು ಮಾತುಕತೆ ನಡೆಸಿ ಠರಾವು ಮಂಡಿಸಿದ್ದು, ಒಂದು ವೇಳೆ ಇವುಗಳನ್ನು ಸರಕಾರ ರದ್ದುಗೊಳಿಸಿದರೆ ಸಾಮಾಜದಲ್ಲಿ ಸಾಮರಸ್ಯಕ್ಕೆ ತೊಂದರೆ ಉಂಟಾಗಲಿದೆ. ಇದಕ್ಕೆ ಸರಕಾರ ಖಂಡಿತಾ ಅವಕಾಶ ನೀಡದಿರಲಿ. ಗೋಹತ್ಯೆ, ಮತಾಂತರ ಕಾಯಿದೆ ನಿಷೇಧ ಬಳಿಕ ಸಮಾಜದಲ್ಲಿ ಶಾಂತಿ-ನೆಮ್ಮದಿಯಿದೆ. ರಾಜ್ಯ ಸರಕಾರವು ಅದಕ್ಕೆ ಪೂರಕ ವಾತಾವರಣ ನಿರ್ಮಿಸಲಿ ಎಂದರು.
ಕರಾವಳಿ ಸ್ವಾಮೀಜಿಗಳು ಒಟ್ಟು ಸೇರಿ ಸಾಮೂಹಿಕ ನಿರ್ಣಯ ಮಾಡಿದ್ದು, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020ನ್ನು ರದ್ದುಗೊಳಿಸುವ ಪ್ರಸ್ತಾಪವ ಸಾಮೂಹಿಕವಾಗಿ ವಿರೋಧಿಸುವುದಾಗಿ ಹೇಳಿದರು.
