Connect with us

    UDUPI

    ಸ್ವಚ್ಛ ಉಡುಪಿ ಮಿಷನ್ – ಟ್ರೈಸಿಕಲ್ ಗಳಿಗೆ ಸಚಿವರಿಂದ ಚಾಲನೆ

    ಉಡುಪಿ, ಸೆಪ್ಟಂಬರ್ 7 : ಸ್ವಚ್ಛ ಉಡುಪಿ ಮಿಷನ್ ಅಂಗವಾಗಿ ಪೈಲಟ್ ಯೋಜನೆಯಲ್ಲಿ ಆಯ್ಕೆಯಾಗಿರುವ ವಾರಂಬಳ್ಳಿ, ನಿಟ್ಟೆ ಮತ್ತು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಿಸಲು ತೆರಳುವ ಟ್ರೈಸಿಕಲ್ ಗಳಿಗೆ ರಾಜ್ಯ ಮೀನುಗಾರಿಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿ.ಪಂ. ಸಿಇಓ ಶಿವಾನಂದ ಕಾಪಶಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply