Connect with us

LATEST NEWS

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸಮಿತಿಯ ಇ -ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಡುಪಿ, ಮಾರ್ಚ್ 18 : ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಸ್ವೀಪ್ ಚುನಾವಣಾ ಇ -ಪತ್ರಿಕೆಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಸ್ವೀಪ್ ಸಮಿತಿಯು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆ ಕುರಿತು ವಿವಿಧ ಕಾರ್ಯಕ್ರಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಚುನಾವಣಾ ಸಂಬAದಿತ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದು, ಇದರ ಒಂದು ಭಾಗವಾಗಿ ಇ – ಪತ್ರಿಕೆಯನ್ನು ಪ್ರಾರಂಭಿಸುವ ಮೂಲಕ ಜನರಿಗ ನೇರವಾಗಿ ಪ್ರಚಾರಪಡಿಸುವ ಕೆಲಸ ಮಾಡುತ್ತಿದೆ ಎಂದರು.

ಜಿಲ್ಲೆಯಲ್ಲಿ ಪ್ರತಿಶತ 100 ರಷ್ಟು ಮತದಾನ ನಡೆಯಬೇಕೆಂಬ ಗುರಿಯನ್ನು ಸ್ವೀಪ್ ಸಮಿತಿಯು ಹೊಂದಿದೆ. ಮತದಾರರು ಯವುದೇ ರೀತಿಯ ಆಸೆ ಆಮಿಷಗಳಿಗೆ ಬಲಿಯಾಗದೇ , ಜಿಲ್ಲೆಯ ಪ್ರತಿಯೊಬ್ಬ ಮತದಾರರು ಮತದಾನ ದಿನದಂದು ಮತ ಚಲಾಯಿಸಲು ಮುಂದಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಪ್ರಸನ್ನ ಹೆಚ್ ಮಾತನಾಡಿ, ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಈ ಸಂಬAದ ಜನರಿಗೆ ಜಾಗೃತಿ ಮೂಡಿಸಲು ಕಳೆದ 2 ತಿಂಗಳಿನಿAದÀ ಕಾರ್ಯಕ್ರಮಗಳು ಹಾಗೂ ಚಟುವಟಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.  ಸ್ವೀಪ್ ಕುರಿತು ಪ್ರತಿದಿನ ನಡೆಯುವ ಕಾರ್ಯಕ್ರಮಗಳ ಕುರಿತ ಸುದ್ದಿಗಳನ್ನು ಇ- ಪತ್ರಿಕೆಯ ಮೂಲಕ ಪ್ರಚಾರಪಡಿಸಲಾಗುವುದು. ಈಗಾಗಲೇ 2 ಲಕ್ಷದವರೆಗೂ ಇ-ಪತ್ರಿಕೆಯು ಪ್ರಚಾರಗೊಳ್ಳುತ್ತಿದೆ ಎಂದರು. ಈ ಸಂದರ್ಭದಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ , ಅಪರ ಜಿಲ್ಲಾಧಿಕಾರಿ ವೀಣಾ, ತಾಲೂಕು ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *