BANTWAL
ಬಂಟ್ವಾಳ – ಜೋಕಾಲಿ ಹಗ್ಗ ಕುತ್ತಿಗೆಗೆ ಸುತ್ತಿ ಪ್ರಾಣ ಕಳೆದುಕೊಂಡ ಬಾಲಕಿ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಬಂಟ್ವಾಳ ಡಿಸೆಂಬರ್ 09: ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದೆ ಎಂದು ಹೇಳಲಾಗಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)