ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ನಾಮಪತ್ರ ದೋಷ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

ಉಡುಪಿ ಎಪ್ರಿಲ್ 5: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾಂಗ್ರೇಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಪೂರ್ಣ ಆಸ್ತಿ ವಿವರ ಸಲ್ಲಿಸದಿರುವ ಕಾರಣ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಜೆಡಿಎಸ್ ಕಾಂಗ್ರೇಸ್ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಕೆ ವೇಳೆ ಪೂರ್ಣ ಆಸ್ತಿ ವಿವರ ಸಲ್ಲಿಸದಿರುವ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳಿಗೆ ಸತೀಶ್ ಎಂಬುವರು ದೂರು ಸಲ್ಲಿಸಿದ್ದರು.

ಈ ಕುರಿತಂತೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಮೋದ್ ಮಧ್ವರಾಜ್ ಅವರ ನಾಮಪತ್ರ ಸರಿಯಾಗಿ ಪರಿಶೀಲನೆ ಮಾಡಬೇಕು ನಾಮಪತ್ರದ ಜೊತೆಗಿನ ಅಫಿಡವೆಟ್ ನ ಲೋಪ ಪತ್ತೆ ಹಚ್ಚಿ ಕಾನೂನಿನ ಮೂಲಕ ಕ್ರಮ ಜರುಗಿಸಲಿ ಎಂದು ಆಗ್ರಹಿಸಿದ್ದಾರೆ.

VIDEO

Facebook Comments

comments