LATEST NEWS
ಸಿರಸಿ ಗಲಭೆ ಜಿಲ್ಲೆಗೆ ವ್ಯಾಪಿಸದಂತೆ ಕ್ರಮ ಕೈಗೊಳ್ಳಿ : ಮುಸ್ಲೀಂ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ

ಸಿರಸಿ ಗಲಭೆ ಜಿಲ್ಲೆಗೆ ವ್ಯಾಪಿಸದಂತೆ ಕ್ರಮ ಕೈಗೊಳ್ಳಿ : ಮುಸ್ಲೀಂ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ
ಮಂಗಳೂರು, ಡಿಸೆಂಬರ್ 15 : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಭುಗಿಲೆದ್ದಿರುವ ಉದ್ವಿಗ್ನತೆ ಕರಾವಳಿಯ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೂ ವ್ಯಾಪಿಸದಂತೆ ಕ್ರಮ ಕೈಗೊಳ್ಳಿ.
ದಕ್ಷಿಣ ಕನ್ನಡ ಜಿಲ್ಲಾ ಮುಸ್ಲೀಂ ಸಂಘಟನೆಗಳ ಒಕ್ಕೂಟ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆಗೆ ಈ ಮನವಿ ಸಲ್ಲಿಸಿತು.

ಮುಸ್ಲೀಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ನೇತೃತ್ವದಲ್ಲಿ ನಿಯೋಗ ಜಿಲ್ಲೆಯಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಸಮರ್ಪಕ ಕ್ರಮ ಕೋರಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ದಕ್ಷಿಣ ಕನ್ನಡ ಎಸ್ಪಿಯವರಿಗೆ ಲಿಖಿತ ಮನವಿ ಸಲ್ಲಿಸಿತ್ತು.
ದಕ್ಷಿಣ ಕನ್ನಡ ಜಿಲ್ಲೆಯು ಮತೀಯ ಸೂಕ್ಷ್ಮತೆಯನ್ನು ಹೊಂದಿದೆ.
ಇತ್ತೀಚೆಗೆ ಬಂಟ್ವಾಳದಲ್ಲಿ ತೀವ್ರ ಮತೀಯ ಉದ್ವಿಗ್ನತೆ ಸಂಭವಿಸಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗೆ ಧಕ್ಕೆಯಾಗಿತ್ತು.
ಶಿರಸಿಯಲ್ಲಿ ಓರ್ವ ಯುವಕ ಅಸ್ವಾಭಾವಿಕವಾಗಿ ಮೃತಪಟ್ಟ ಕಾರಣದಿಂದ ಹಿಂಸೆ ಭುಗಿಲೆದ್ದಿದೆ.
ಇದು ಹತ್ತಿರದ ಜಿಲ್ಲೆಗಳಾದ ದಕ್ಷಿಣ ಕನ್ನಡಕ್ಕೆ ಅದು ವ್ಯಾಪಿಸದಂತೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.