LATEST NEWS
ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಎಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ
ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಎಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ
ಉಡುಪಿ, ಡಿಸೆಂಬರ್ 22 : ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗ ಮತ್ತು ದಾಸೋಹ ಏರ್ಪಡಿಸುವ ಸಂದರ್ಭದಲ್ಲಿ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸುವ ಕುರಿತು ಎಲ್ಲಾ ದೇವಾಲಯಗಳ ಆಡಳಿತ ಮಂಡಳಿಗಳ ಮುಖ್ಯಸ್ಥರಿಗೆ ಕಾರ್ಯಾಗಾರ ಏರ್ಪಡಿಸಿ , ಆಹಾರ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.
ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚೆಗೆ ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ಯಾಡಿ ಗ್ರಾಮದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಕ್ತಾಧಿಗಳಿಗೆ ನೀಡಲಾದ ಪ್ರಸಾದದಲ್ಲಿ ವಿಷ ಮಿಶ್ರಣ ದಿಂದ ಕೆಲವರು ಮೃತಪಟ್ಟು, ಹಲವು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಆದ್ದರಿಂದ ದೇವಾಲಯಗಳಲ್ಲಿ ದಾಸೋಹ ಮತ್ತು ಪ್ರಸಾದ ತಯಾರಿಸುವಾಗ ಅಗತ್ಯ ರೀತಿಯ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಪ್ರಸಾದ ತಯಾರಿಕೆ ಕೋಣೆ ಮತ್ತು ದಾಸೋಹ ತಯಾರಿಸುವ ಅಡುಗೆ ಕೋಣೆಗೆ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸುವಂತೆ ಮತ್ತು ಈ ಕೋಣೆಗಳಿಗೆ ಯಾರೇ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ನಿಗಾ ವಹಿಸುವಂತೆ, ತಯಾರಿಸಿರುವ ನೈವೇದ್ಯ, ಪ್ರಸಾದ, ಅಡುಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಜಿಲ್ಲಾಧಿಕಾರಿ, ಸುರಕ್ಷಿತ ಆಹಾರ ತಯಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ದೇವಾಲಯಗಳ ಆಡಳಿತ ಮಂಡಳಿಗಳ ಮುಖ್ಯಸ್ಥರಿಗೆ ಪ್ರತ್ಯೇಕ ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಿಂದ ಗೋವಾಗೆ ತೆರಳುವ ಮೀನು ಸಾಗಾಟ ವಾಹನಗಳ ಮಾಲೀಕರು ಆಹಾರ ಸುರಕ್ಷತಾ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಕೆ ಬಳಸುವ ಪದಾರ್ಥಗಳ ಗುಣಮಟ್ಟದ ಕುರಿತು ಆಹಾರ ಸುರಕ್ಷತಾ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆ ಹಾಗೂ ಆಹಾರ ಪದಾರ್ಥಗಳು ಸರಬರಾಜು ಆಗುವ ಗೋಡೌನ್ಗಳಿಗೆ ಸಹ ಭೇಟಿ ನೀಡಿ ಕೈಗೊಂಡಿರುವ ಸುರಕ್ಷತಾ ಕ್ರಮಗಳು ಮತ್ತು ಅಲ್ಲಿರುವ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ಪರಿಶೀಲಿಸುವಂತೆ ಹಾಗೂ ಈ ಕುರಿತು ತಮಗೆ ವರದಿಯನ್ನು ನೀಡುವಂತೆ ಸೂಚಿಸಿದರು.
Facebook Comments
You may like
ಮಂಗಳೂರಿಗೆ ಯೋಗಿ ಆದಿತ್ಯನಾಥ; ಪೇಜಾವರ ಶ್ರೀಗಳ ಭೇಟಿ
ದೇವಸ್ಥಾನದ ಅನ್ನದಾನ ಸೇವೆಗೆ ಈ ಭಿಕ್ಷುಕಿ ಕೊಟ್ಟ ದೇಣಿಗೆ ಎಷ್ಟು ಗೊತ್ತಾ!
ಉಡುಪಿ – ರಾಜ್ಯದಲ್ಲೇ ಪ್ರಪ್ರಥಮ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ….!!
ಗೋಮಾಳದ ಭೂಮಿಯನ್ನು ಗೋಶಾಲೆಗಳಿಗೆ ನೀಡಲು ಕಂದಾಯ ಮಂತ್ರಿ ಅಸ್ತು
ದೊಡ್ಡಣಗುಡ್ಡೆ ರಹ್ಮಾನಿಯಾ ಮಸೀದಿಯಲ್ಲಿ ಉರೂಸ್ ಸಡಗರ
ಕೋಳಿ ಕಳ್ಳರಿದ್ದಾರೆ ಎಚ್ಚರಿಕೆ!!! ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ?
You must be logged in to post a comment Login