Connect with us

    BANTWAL

    ಅಗತ್ಯ ಬಿದ್ದರೆ ಕಠಿಣ ಕ್ರಮಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

    ಅಗತ್ಯ ಬಿದ್ದರೆ ಕಠಿಣ ಕ್ರಮಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

    ಬಂಟ್ವಾಳ ಎಪ್ರಿಲ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದ ಹಿನ್ನಲೆ ಅಗತ್ಯ ಎನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

    ಬಂಟ್ವಾಳ ತಾಲ್ಲೂಕಿನ ಕಸಬಾ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಸಂಸದರ ನೇತೃತ್ವದಲ್ಲಿ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

    ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್‌ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ 213 ಮನೆಗಳಲ್ಲಿ ನಿತ್ಯ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ, ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

    ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ದೂರವಾಣಿ ಸಂಪರ್ಕ ನೀಡಲಾಗಿದೆ. 11 ಅಧಿಕಾರಿಗಳನ್ನು ಈ ಪ್ರದೇಶದಲ್ಲಿ ಹಗಲು-ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

    ಸಾರ್ವಜನಿಕರು ಮನೆಯಲ್ಲಿ ಇದ್ದುಕೊಂಡು ಅಗತ್ಯ ಸಾಮಗ್ರಿಗಳನ್ನು ತೆಗೆದುಕೊಳ್ಳಬಹುದು.ದಿನಸಿ ಸಾಮಗ್ರಿ, ಹಾಲು, ದಿನಪತ್ರಿಕೆ, ಔಷಧಿ, ಊಟೋಪಚಾರ, ತರಕಾರಿ, ಹಣ್ಣು, ಮಾಂಸಗಳನ್ನು ಸಾರ್ವಜನಿಕರ ಬೇಡಿಕೆಯಂತೆ ಒದಗಿಸಲು ಹಾಗೂ ಬ್ಯಾಂಕಿಂಗ್ ಸೇವೆ, ಗ್ಯಾಸ್ ಇನ್ನಿತರ ತುರ್ತು ಸೇವೆಗಳನ್ನು ಒದಗಿಸಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply