Connect with us

    LATEST NEWS

    ಕರ್ನಾಟಕದಲ್ಲಿ ಕೋವಿಡ್ ಲಸಿಕೆಗೆ ಬೆಲೆ ಇಲ್ಲ – ತಲಪಾಡಿಯಲ್ಲಿ ಕೋವಿಡ್ ಲಸಿಕೆ ವರದಿ ಸುಟ್ಟು ಪ್ರತಿಭಟನೆ 

    ಮಂಗಳೂರು ಅಗಸ್ಟ್ 09: ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಜನರನ್ನು ಕೊರೊನಾ ನೆಪದಲ್ಲಿ ನಿರ್ಬಂಧಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಮತ್ತೆ ತಲಪಾಡಿ ಗಡಿಯಲ್ಲಿ ಕರ್ನಾಟಕ ಸರಕಾರದ ವಿರುದ್ದ ಪ್ರತಿಭಟನೆ ನಡೆದಿದ್ದು, ಲಸಿಕೆ ಸರ್ಟಿಫಿಕೇಟ್ ನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ.


    ಈಗಾಗಲೇ ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್ ಮುಖಂಡ ಹರ್ಷಾದ್ ವರ್ಕಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕದ ಗಡಿಭಾಗ ಬಂದ್ ನಡೆಸಿರುವ ನೀತಿ ಜನಸಾಮಾನ್ಯರನ್ನು ಬೀದಿಗೆ ತಳ್ಳಿದೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಮಧ್ಯ ಪ್ರವೇಶ ಮಾಡಿ, ಗಡಿ ಸಮಸ್ಯೆ ಇತ್ಯರ್ಥ ಪಡಿಸಬೇಕಾಗಿದೆ.


    ಹಿಂದೆಯೂ ಗಡಿ ಬಂದ್ ಮಾಡಿದಾಗ ನಾವು ಸಹಕಾರ ನೀಡಿದ್ದೇವೆ. ಆದರೆ, ಈಗ ನಾವು ಒಪ್ಪಲ್ಲ. ಕೇಂದ್ರ ಸರಕಾರವೇ ಎರಡು ಡೋಸ್ ಲಸಿಕೆ ಪಡೆದವರಿಗೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಹೇಳಿದೆ. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದ ಕೇರಳದ ಗಡಿ ನಿವಾಸಿಗಳನ್ನು ಕರ್ನಾಟಕ ಪ್ರವೇಶಕ್ಕೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದರು. ‌

    ಕರ್ನಾಟಕ ಮತ್ತು ಕೇರಳದ ಉಭಯ ಸರಕಾರಗಳ ನಿರ್ಲಕ್ಷ್ಯ ಧೋರಣೆ ವಿರುದ್ಧ ಯುಡಿವೈಎಫ್ ಮಂಜೇಶ್ವರ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೋವಿಡ್ ಲಸಿಕೆಯ ಸರ್ಟಿಫಿಕೇಟ್ ನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಲಸಿಕೆ ಪಡೆದರೂ ಅದಕ್ಕೆ ಬೆಲೆಯಿಲ್ಲ ಎಂದಾದ್ರೆ ಈ ಲಸಿಕೆ ಯಾಕೆ ಇರಬೇಕು. ಈ ವರದಿ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದರು. ‌

    Share Information
    Advertisement
    Click to comment

    Leave a Reply

    Your email address will not be published. Required fields are marked *