SPORTS
ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ :ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ :ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮಂಗಳೂರು, ನವೆಂಬರ್ 01: ತಲಪಾಡಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
20 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ 18 ಚಿನ್ನ, 16 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಪಡೆದು ಪ್ರಶಸ್ತಿಯನ್ನು ಪಡೆಯಿತು.
ಬಾಲಕಿಯರ ವಿಭಾಗದಲ್ಲಿ 19 ಚಿನ್ನ, 16 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಪಡೆದು ಆಳ್ವಾಸ್ ಪ.ಪೂ. ಕಾಲೇಜು ಪ್ರಶಸ್ತಿಯನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ವೈಯಕ್ತಿಕ ಪ್ರಶಸ್ತಿಯನ್ನು ನವನೀತ್, ಬಾಲಕಿಯರ ವಿಭಾಗದಲ್ಲಿ ಜೋತ್ಸ್ನಾ ಮತ್ತು ಪ್ರಿಯಾ ಎಲ್.ಡಿ. ಪಡೆದರು.

ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ನವೆಂಬರ್ 7 ಮತ್ತು 8ರಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ದ.ಕ. ಹಾಗೂ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು, ತಲಪಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.