SPORTS
ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ :ಆಳ್ವಾಸ್ ಪಿಯು ಕಾಲೇಜಿಗೆ ಅವಳಿ ಪ್ರಶಸ್ತಿ
ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ :ಆಳ್ವಾಸ್ ಪಿಯು ಕಾಲೇಜಿಗೆ ಅವಳಿ ಪ್ರಶಸ್ತಿ
ಮಂಗಳೂರು,ನವೆಂಬರ್ 01: ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜು ನಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಫೈನಲ್ ಪಂದ್ಯದಲ್ಲಿ ಆಳ್ವಾಸ್ ಬಾಲಕರ ತಂಡ ಪರಿಜ್ಞಾನ ಪಿ.ಯು. ಕಾಲೇಜು, ಸೋಮೇಶ್ವರ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.
ಆಳ್ವಾಸ್ ಬಾಲಕಿಯರ ತಂಡ, ಪರಿಜ್ಞಾನ ಪದವಿಪೂರ್ವ ಕಾಲೇಜನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
You must be logged in to post a comment Login