Connect with us

BELTHANGADI

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್

ಧರ್ಮಸ್ಥಳ, ನವೆಂಬರ್ 11: ಕಾಲಿವುಡ್ ನಟ ವಿಶಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಮಾಡಿಸಿ, ಮಂಜುನಾಥಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ನೆಚ್ಚಿನ ನಟನನ್ನು ನೋಡಿ ಫ್ಯಾನ್ಸ್ ಮುಗಿಬಿದ್ದಿದ್ದಾರೆ.‌ ಇನ್ನೂ ವಿಶಾಲ್ `ಲಾಠಿ’ ಚಿತ್ರದ ಮೂಲಕ ಖಡಕ್ ಆಫೀಸರ್ ಆಗಿ ತೆರೆಗೆ ಅಪ್ಪಳಿಸುತ್ತಿದ್ದಾರೆ. ಹೊಸ ಸಿನಿಮಾಗಾಗಿ ನಿರ್ದೇಶನಕ್ಕೂ ಕೈಹಾಕಿದ್ದಾರೆ.

Advertisement
Click to comment

You must be logged in to post a comment Login

Leave a Reply