Connect with us

FILM

ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ ನಿಧನ

ಚೆನ್ನೈ, ಎಪ್ರಿಲ್ 17: ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ನಟ ವಿವೇಕ್ (59) ಚೆನ್ನೈ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ಹಾಗೂ ಸ್ಟಂಟ್ ಅಳವಡಿಕೆಗಾಗಿ ವದಪಳನಿಯಲ್ಲಿರುವ ಎಸ್‌ಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಇಂದು ಮುಂಜಾನೆ ನಿಧನರಾಗಿದ್ದಾರೆ.

ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4.35 ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ