Connect with us

FILM

ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನ

ಚೆನ್ನೈ ಡಿಸೆಂಬರ್ 24: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.


ಡಿಸೆಂಬರ್ 23 ರ ರಾತ್ರಿ ಮಣಿ ಅವರು ಚೆನ್ನೈನ ಪೊಝಿಚಲೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮೂರ್ಛೆ ಹೋದರು ಕುಟುಂಬ ಸದಸ್ಯರು ಕೂಡಲೇ ಅವರನ್ನು ಕ್ರೋಮ್‌ಪೇಟೆಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಮಣಿ ನಿಧನ ಹೊಂದಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಪೊಝಿಚಾಲೂರಿನ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು ಸಂಜೆ 5ರ ಸುಮಾರಿಗೆ ಕ್ರೋಂಪೇಟೆಯಲ್ಲಿರುವ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ. ಬೋಂಡಾ ಮಣಿ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟರಾಗಿದ್ದರು. 1991 ರಲ್ಲಿ ಬಿಡುಗಡೆಯಾದ ನಟ ಭಾಗ್ಯರಾಜ್ ಅವರ ‘ಪೌನು ಪೌನುತನ್’ ಚಿತ್ರದ ಮೂಲಕ ಬೋಂಡಾ ಮಣಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಪೊನ್ವಿಲಾಂಗು, ಪೊಂಗಲೋ ಪೊಂಗಲ್, ಸುಂದರ ಟ್ರಾವೆಲ್ಸ್, ಮರುದಮಲೈ, ವಿನ್ನರ್, ವೇಲಾಯುಧಂ, ಜಿಲ್ಲಾ, ವಸೀಕರ ಸೇರಿದಂತೆ 270 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಹಾಸ್ಯ ನಟ ವಡಿವೇಲು ಅವರೊಂದಿಗೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *