LATEST NEWS
ಕೋಟ – ಹೈಡ್ರೋ ಕ್ಲೋರಿಕ್ ಆಸಿಡ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ ಸೆಪ್ಟೆಂಬರ್ 05: ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೈಡ್ರೋ ಕ್ಲೋರಿಕ್ ಆಸಿಡ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಟ್ಯಾಂಕರ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.
ಕಾರವಾರದಿಂದ ಮಂಗಳೂರು ಹೈಡ್ರೋ ಕ್ಲೋರಿಕ್ ಆಸಿಡ್ ತುಂಬಿಸಿಕೊಂಡು ಹೊರಟಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಕೋಟ ಮಣೂರು ಬಳಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ಪಲ್ಟಿ ಹೊಡೆದ ಹಿನ್ನಲೆಯಲ್ಲಿ ಹೈಡ್ರೋ ಕ್ಲೋರಿಕ್ ಆಸಿಡ್ ಗ್ಯಾಸ್ ರೂಪದಲ್ಲಿ ಮುಂಜಾನೆಯಿಂದಲೂ ಲೀಕ್ ಆಗುತ್ತಿದೆ. ಸದ್ಯ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಆಗ್ನಿಶಾಮಕ ದಳದವರಿಂದ ಕಾರ್ಯಚರಣೆ ನಡೆಸಿದ್ದು, ಲಿಕೇಜ್ ಮುಂದುವರಿದಂತೆ ಆಗ್ನಿಶಾಮಕ ದಳದ ಸಿಬ್ಬಂದಿಗಳು ತಡೆದಿದ್ದಾರೆ.
